Online Desk
ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ದತ್ತಪೀಠಕ್ಕೆ ಶೃಂಗೇರಿ ಮೂಲದ ಶ್ರೀಕಾಂತ್, ಚಿಕ್ಕಬಳ್ಳಾಪುರದ ಸಂದೀಪ್ ರನ್ನು ನೇಮಕ ಮಾಡಲಾಗಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯ ಸರ್ಕಾರ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಸದಸ್ಯರನ್ನು ಒಳಗೊಂಡ ಆಡಳಿತ ಮಂಡಳಿಯನ್ನು ರಚಿಸಿತ್ತು.
2018ರ ಚುನಾವಣಾ ಪ್ರಣಾಳಿಕೆಯಂತೆ ಬಿಜೆಪಿ ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡಿದ್ದು ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಇನ್ನು ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ್ದು ಅದರಂತೆ ಡಿಸೆಂಬರ್ 6,7,8, ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App