The New Indian Express
ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.
ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರವರಿ 20ರವೆರಗೂ ಎಲ್ಲಾ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಅವಧಿಯಲ್ಲಿ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ.
ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮ 1937 ನಿಯಮ 91ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ಎಚ್ಚರಿಸಿದ್ದಾರೆ.
Meat stalls that provide fish and meat will remain closed and non veg will not be served in restaurants in 10 km radius of Airforce Station Yelahanka from Jan 30 to Feb 20. #AeroIndia will be held at the Airforce station from February 13 to 17. pic.twitter.com/xNet28iAFu
— Pearl Dsouza (@pearlmdsouza) January 27, 2023
For more news update stay with actp news
Android App
Facebook
Twitter
Dailyhunt
Share Chat
Telegram
Koo App