Online Desk
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದಲ್ಲು, ಉಕ್ಕು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.
Landed in Hubballi and excited to meet the people of Karnataka in public meetings and a roadshow scheduled tomorrow.
Will participate in the Platinum Jubilee celebrations of B.V. Bhoomaraddi College and then lay the foundation stone of the NFSU Karnataka campus in Dharwad. pic.twitter.com/ldVG4gDA7V
— Amit Shah (@AmitShah) January 27, 2023
ನಂತರ ವಿಮಾನ ನಿಲ್ದಾಣದಿಂದ ಡೆನಿಸನ್ಸ್ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿರುವ ಅಮಿತ್ ಶಾ, ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ, ಶನಿವಾರ ರೋಡ್ ಶೋ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬಿ.ವಿ.ಭೂಮರಡ್ಡಿ ಕಾಲೇಜಿನ 75ನೇ ವರ್ಷದ (ಪ್ಲಾಟಿನಂ ಮಹೋತ್ಸವ) ಸಮಾರಂಭದಲ್ಲಿ ಭಾಗವಹಿಸಲಿರುವ ಅಮಿತ್ ಶಾ, ಧಾರವಾಡದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಶಾಖೆಯ ಭೂಮಿ ಪೂಜೆಯನ್ನು ಅವರು ನೆರವೇರಿಸಲಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App