Karnataka
oi-Naveen Kumar N

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಜೂನ್ 20ರಂದು ಪಿಯುಸಿ ಪೂರಕ ಫಲಿತಾಂಶ 2023 ವನ್ನು ಪ್ರಕಟಿಸಿದೆ. ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, karresults.nic.in ಈ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ನೋಡಬಹುದಾಗಿದೆ.
ಮೇ23ರಿಂದ ಜೂನ್ 3ರವರೆಗೆ 2023ರ ದ್ವಿತೀಯ ಪಿಯಸಿ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಬಾರಿ ಒಟ್ಟು 1,57,756 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದಿದ್ದರು ಇದರಲ್ಲಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ ಮೂರು ಗಂಟೆಯ ನಂತರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 74.64 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಲು ಬಯಸಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು.
ಫಲಿತಾಂಶ ನೋಡವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ www.karresults.nic.in ಗೆ ಭೇಟಿ ನೀಡಬೇಕು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ 2023 ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕ್ಲಿಕ್ ಮಾಡಿದ ನಂತರ ಓಪನ್ ಆಗುವ ಪುಟದಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ.
ನಂತರ ‘Submit’ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ಫಲಿತಾಂಶವನ್ನು ನೋಡಬಹುದು.
ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಬಹುದು.
English summary
Karnataka 2nd PUC Supplementary Results for 2023 Announced on June 20th. A total of 1,57,756 students appeared for the 2nd PUC exam, out of which 50,478 students passed. Know how to check the results.
Story first published: Tuesday, June 20, 2023, 13:23 [IST]