Last Updated:
ಗುರುವಾರ ಮಧ್ಯರಾತ್ರಿ ಸುಮಾರು 3 ನಿಮಿಷಗಳ ಸೆಲ್ಫಿ ವಿಡಿಯೋವೊಂದನ್ನ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ರಿಲೀಸ್ ಮಾಡಿದ್ದು, ಮಹತ್ವದ ಸಂದೇಶ ನೀಡಿದ್ದಾರೆ.
ನವದೆಹಲಿ (ಜು.24): ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಜಿರಳೆ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರತಿಭಟನೆ ಜೋರಾಗಿದ್ದು, ಕೇಂದ್ರಕ್ಕೆ ದೊಡ್ಡ ತಲೆಬಿಸಿಯಾಗಿದೆ. ಗುರುವಾರ ಮಧ್ಯರಾತ್ರಿ ಸುಮಾರು 3 ನಿಮಿಷಗಳ ಸೆಲ್ಫಿ ವಿಡಿಯೋವೊಂದನ್ನ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ರಿಲೀಸ್ ಮಾಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಮಸೂದೆಯನ್ನ ತರೋದಾಗಿಘೋಷಿಸಿದರು.
“ಪ್ರಶ್ನೆಪತ್ರಿಕೆ ಸೋರಿಕೆ ಘಟನೆ ಬೆಳಕಿಗೆ ಬಂದ ತಕ್ಷಣ, ಸರ್ಕಾರ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿತು. ನಾವು ಅಪರಾಧಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದೇವೆ. ನಾವು 22 ಲಕ್ಷ ಅಭ್ಯರ್ಥಿಗಳಿಗೆ ತಕ್ಷಣ ಪರೀಕ್ಷೆಯನ್ನು ಮರು ನಡೆಸಿದ್ದೇವೆ ಮತ್ತು ಫಲಿತಾಂಶಗಳನ್ನು ಘೋಷಿಸಿದ್ದೇವೆ. ಈ ಅಪರಾಧಿಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳು ಮತ್ತು ಕಠಿಣ ಶಿಕ್ಷೆಗಳನ್ನು ಖಚಿತಪಡಿಸಿಕೊಳ್ಳಲು ಕರಡು ಮಸೂದೆಯನ್ನು ಸಿದ್ಧಪಡಿಸುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಕರಡನ್ನು ಅಂತಿಮಗೊಳಿಸಲು ಅಧಿಕಾರಿಗಳು ರಾತ್ರಿಯಿಡೀ ಶ್ರಮಿಸಿದರು. ಶುಕ್ರವಾರದ ಸಂಪುಟ ಸಭೆಯಲ್ಲಿ ನಾವು ಅದನ್ನು ಚರ್ಚಿಸಿ ಅನುಮೋದಿಸುತ್ತೇವೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಎರಡನೇ ವಾರದಲ್ಲಿ ಈ ಮಸೂದೆಯನ್ನು ಉಭಯ ಸದನಗಳಲ್ಲಿ ಅಂಗೀಕರಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.
ಉಪವಾಸ ಅಂತ್ಯಗೊಳಿಸುವ ವಾಂಗ್ಚುಕ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. “ಸೋನಮ್ ಜಿ ವೈದ್ಯರ ಸಲಹೆಯನ್ನು ಪಾಲಿಸಿ ತಮ್ಮ ಹಳೆಯ ಆರೋಗ್ಯ ಮತ್ತು ತೂಕವನ್ನು ಶೀಘ್ರದಲ್ಲೇ ಮರಳಿ ಪಡೆಯಲಿ ಎಂದು ನಾನು ಬಯಸುತ್ತೇನೆ. ಅವರು ಪರಿಪೂರ್ಣ ಆರೋಗ್ಯದಿಂದ ಇರಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ವಿದ್ಯಾರ್ಥಿಗಳ ಪರವಾಗಿ ಹೋರಾಡುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸೋನಮ್ ವಾಂಗ್ಚುಕ್ ಅವರು ಉಪವಾಸ ಕೈಬಿಟ್ಟಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು.
“ಸೋನಮ್ ಸರ್, ನೀವು 26 ದಿನಗಳ ನಂತರ ಉಪವಾಸ ಅಂತ್ಯಗೊಳಿಸಿರುವುದು ನಮಗೆ ತುಂಬಾ ಸಮಾಧಾನ ತಂದಿದೆ. ನಿಮ್ಮ ಅಸಾಧಾರಣ ಧೈರ್ಯ ಮತ್ತು ತ್ಯಾಗಕ್ಕೆ ಧನ್ಯವಾದಗಳು. ನಿಮ್ಮ ಸ್ವಂತ ಪ್ರಾಣವನ್ನೇ ಪಣಕ್ಕಿಟ್ಟು ನೀವು ದೇಶದ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಿದ್ದೀರಿ. ನಿಮ್ಮ ಜೀವ ಈ ದೇಶಕ್ಕೆ ಬಹಳ ಅಮೂಲ್ಯವಾಗಿದೆ. ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್ನಲ್ಲಿ ನಮ್ಮ ಶಾಂತಿಯುತ ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಅವರು ಸ್ಪಷ್ಟಪಡಿಸಿದರು














