Last Updated:
ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿದೆ. ಪದವೀಧರ ಅಭ್ಯರ್ಥಿಗಳು ತಕ್ಷಣವೇ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರು: ಬ್ಯಾಂಕಿಂಗ್ ಮತ್ತು ವಿಮಾ ವಲಯದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಇದು ಅತ್ಯಂತ ಪ್ರಮುಖ ಮಾಹಿತಿ. ಭಾರತ ಸರ್ಕಾರದ ಪ್ರತಿಷ್ಠಿತ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) ಖಾಲಿ ಇರುವ 500 ‘ಅಸಿಸ್ಟೆಂಟ್’ (Class III) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 7 (ನಾಳೆ) ಕಡೆಯ ದಿನವಾಗಿದೆ.
ಭಾರಿ ಪೈಪೋಟಿ ನಿರೀಕ್ಷೆಯಿರುವ ಹಾಗೂ ಅತ್ಯುತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಕೊನೆ ಕ್ಷಣದ ಸರ್ವರ್ ದಟ್ಟಣೆಗೆ ಕಾಯದೆ, ಅರ್ಹ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸುವುದು ಒಳಿತು. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ, ಅತ್ಯಂತ ಪ್ರಮುಖ ಷರತ್ತೆಂದರೆ ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಪ್ರಾದೇಶಿಕ ಭಾಷೆಯನ್ನು (ಉದಾಹರಣೆಗೆ ಕರ್ನಾಟಕದಿಂದ ಅರ್ಜಿ ಸಲ್ಲಿಸುವವರು ಕನ್ನಡವನ್ನು) ಕಡ್ಡಾಯವಾಗಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ, ಜುಲೈ 1, 2026ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಕೆ ಹೇಗೆ? ಮುಂದೇನು?
Bangalore [Bangalore],Bangalore,Karnataka














