Karnataka: ಬಿಜೆಪಿ ಅವಧಿಯ ಹಗರಣಗಳ ತನಿಖೆ ಯಾರಿಂದ? SIT ಇಲ್ಲ CID?: ಗೃಹ ಸಚಿವರು ಹೇಳಿದ್ದೇನು? | SIT CID Which Team will Investigation Against When BJP Govt Scams, G Parameshwara

Karnataka

oi-Shankrappa Parangi

|

Google Oneindia Kannada News

ಬೆಂಗಳೂರು, ಜೂನ್ 27: ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಕೆಲಸಕ್ಕೆ ಕೈಹಾಕಿದೆ. ಅದೆನೆಂದರೆ, ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಆಗಿರುವ ಹಗರಣಗಳನ್ನು ತನಿಖೆ ನಡೆಸಲು ತಿರ್ಮಾನಿಸಿರುವುದು. ಈ ತನಿಖೆ ಸಂಬಂಧ ನಾನು ಎಸ್‌ಐಟಿ ರಚನೆ ಬಗ್ಗೆ ಮಾತನಾಡಿಲ್ಲ. ಸಿಐಡಿಗೆ ವಹಿಸುವ ಪ್ರಸ್ತಾವನೆ ಗೃಹ ಇಲಾಖೆ ಮುಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ ಎಂಬ ವರದಿಗಳ ಕುರಿತು ಮಂಗಳವಾರ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದರು. ತನಿಖೆಗಾಗಿ ನಾವು ಎಸ್‌ಐಟಿ ರಚಿಸುತ್ತೇವೆ ಎಂದು ನಾನು ಹೇಳಿಲ್ಲ. ಪ್ರಕರಣಗಳ ತನಿಖೆಗೆ ಸಿಐಡಿಗೆ ಹಸ್ತಾಂತರಿಸುವ ಪ್ರಸ್ತಾವನೆ ಗೃಹ ಇಲಾಖೆಯ ಮುಂದಿದೆ ಎಂದು ನಾನು ಹೇಳಿದ್ದೇನೆ. ಆ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

SIT CID which team will ivestigate

ಒಂದಂತೂ ಸತ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಗಣಗಳ ಮರು ತನಿಖೆ ಮಾಡುತ್ತೇವೆ. ಅದರಲ್ಲೂ ವಿಶೇಷವಾಗಿ ಬಿಟ್‌ಕಾಯಿನ್ ಕೇಸಿನ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಾರಣ ಇದರಲ್ಲಿ ಹೇರಳ ಪ್ರಮಾಣದಲ್ಲಿ ಹಣ ತೊಡಗಿಸಿಕೊಂಡಿದೆ. ಹೀಗಾಗಿಯೇ ಇದರಲ್ಲಿ ಅನೇಕ ಜನರು ತೊಡಗಿಕೊಳ್ಳುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಬಿಟ್‌ಕಾಯಿನ್ ಕೇಸ್: ಮರು ತನಿಖೆ ಶೀಘ್ರ

ಈ ಬಿಟ್ ಕಾಯಿನ ್ಹಗರಣವು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಆರಂಭದಿಂದಲು ಮರು ತನಿಖೆ ಮಾಡಲುನಿರ್ಧಾರ ಮಾಡಿದೆ. ಈ ಮೊದಲು ಪೊಲೀಸರು ಬಿಟ್‌ಕಾಯಿನ್ ಕೇಸಿನ ತನಿಖೆಗೆ ಸಾಕ್ಷಿ ಇಲ್ಲವೆಂದು ಹೇಳಿದ್ದರು.

SIT CID which team will ivestigate

ಇತ್ತ ಸಿಎಂ ಸಿದ್ದರಾಮಯ್ಯನವರು ಹಾಸನದಲ್ಲಿ ಸುದ್ದಿಗಾರರಿಗೆ ಪ್ರಕ್ರೆಯಿಸಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ ವ್ಯವಹಾರ, ಬಿಜೆಪಿಯ 40ಪರ್ಸೆಂಟ್ ಕಮಿಷನ್ , ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ಇನ್ನೂ ನೀರಾವರಿ ಕಾಮಗಾರಿಗಳಲ್ಲಿ ಅಕ್ರಮ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಈ ಮೂಲಕ ಹಗರಣದಲ್ಲಿ ಪಾಲ್ಗೊಂಡಿದ್ದವರಿಗೆ ಕಾಂಗ್ರೆಸ್ ಬಿಸಿ ಮುಟ್ಟಿಸಲು, ಬೆಂಬಲಿಸಿದ ನಾಯಕರಿಗೆ ತಕ್ಕ ಶಾಸ್ತಿ ಮಾಡಿಸಲು ಸನ್ನದ್ಧವಾಗುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಮಾತ್ರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ.

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿ ಅಕ್ರಮಗಳ ವಿರುದ್ಧ ತನಿಖೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ ದುರಂತ ಸಂಭವಿಸಿತ್ತು. ಆ ಬಗ್ಗೆ ಮರು ತನಿಖೆ ಕೈಗೊಳ್ಳುತ್ತೇವೆ. ಈ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಅಂದಿನ ಆರೋಗ್ಯ ಸಚಿವ ಬಿಜೆಪಿ ನಾಯಕ ಡಾ. ಸುಧಾಕರ್ ತಪ್ಪು ಮಾಹಿತಿ ನೀಡಿದ್ದರು. ಆಕ್ಸಿಜನ್ ಕೊರತೆಯ ಅವಘಡದಲ್ಲಿ ಇಬ್ಬರೇ ಮೃತಪಟ್ಟಿರುವುದಾಗಿ ಅವರು ಹೇಳಿದ್ದರು ಎಂದು ಅವರು ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ಬರಲಿದೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದೇವೆ ಎಂದು ಅವರು ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಿದರು.

English summary

SIT or CID which team will ivestigation against when BJP government scams, G Parameshwara reaction.

Story first published: Tuesday, June 27, 2023, 15:43 [IST]

Source link