Last Updated:
ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರ ಬಹುನಿರೀಕ್ಷಿತ ಸಿನಿಮಾದಲ್ಲಿ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಕನ್ನಡದ ನಟಿ ಶ್ರೀಲೀಲಾ (Srileela) ಸದ್ಯ ದೊಡ್ಡ ಅವಕಾಶಗಳ ಹುಡುಕಾಟದಲ್ಲಿದ್ದಾರೆ. ಇತ್ತೀಚಿನ ಕೆಲವು ಸಿನಿಮಾಗಳು ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ನಟಿಯ ಮೇಲಿನ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಈ ನಡುವೆ ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರ ಬಹುನಿರೀಕ್ಷಿತ ಸಿನಿಮಾದಲ್ಲಿ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ನಿಜವಾದರೆ, ಶ್ರೀಲೀಲಾ ಅವರ ವೃತ್ತಿಜೀವನಕ್ಕೆ ಇದು ದೊಡ್ಡ ತಿರುವಾಗುವ ಸಾಧ್ಯತೆಯಿದೆ.














