Last Updated:
ಬಾಲಿವುಡ್ನ ಹಿರಿಯ ನಟಿ ಸುಶ್ಮಿತಾ ಮುಖರ್ಜಿ ತಮ್ಮ ಜೀವನದ ಅತ್ಯಂತ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಹಲವು ಜನಪ್ರಿಯ ಸಿನಿಮಾಗಳು ಮತ್ತು ಕಿರುತೆರೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರುವ ಅವರು, ಒಂದು ಹಂತದಲ್ಲಿ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ತಮಗೆ ಇಷ್ಟವಿಲ್ಲದ ಕೆಲವು ಸಿ-ಗ್ರೇಡ್ ಸಿನಿಮಾಗಳಲ್ಲಿ ನಟಿಸಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.
ಬಾಲಿವುಡ್ನ ಹಿರಿಯ ನಟಿ ಸುಶ್ಮಿತಾ ಮುಖರ್ಜಿ (Sushmita Mukherjee) ತಮ್ಮ ಜೀವನದ ಅತ್ಯಂತ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಹಲವು ಜನಪ್ರಿಯ ಸಿನಿಮಾಗಳು ಮತ್ತು ಕಿರುತೆರೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರುವ ಅವರು, ಒಂದು ಹಂತದಲ್ಲಿ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ತಮಗೆ ಇಷ್ಟವಿಲ್ಲದ ಕೆಲವು ಸಿ-ಗ್ರೇಡ್ ಸಿನಿಮಾಗಳಲ್ಲಿ ನಟಿಸಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ. ಬರೋಬ್ಬರಿ 1 ಕೋಟಿ ರೂಪಾಯಿ ಸಾಲದ ಹೊರೆ ಕುಟುಂಬದ ಮೇಲಿದ್ದಾಗ, ಅದನ್ನು ತೀರಿಸಲು ಬೇರೆ ದಾರಿ ಕಾಣದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾಗಿ ನಟಿ ವಿವರಿಸಿದ್ದಾರೆ.














