Last Updated:
ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಯಂತ್ರವು 7 ಮೀಟರ್ ಉದ್ದವನ್ನು ಹೊಂದಿದೆ. ಇದು ಕನ್ವೇಯರ್ ಬೆಲ್ಟ್ನಂತೆಯೇ ನಿರಂತರವಾಗಿ ವೃತ್ತಾಕಾರದಲ್ಲಿ ಚಲಿಸುತ್ತಲೇ ಇರುತ್ತದೆ.
ತಿರುಮಲ (Tirumala) ಶ್ರೀ ವೆಂಕಟೇಶ್ವರನ (Venkateshwara) ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯುವ ಭಕ್ತರ (Devotees) ಅನುಕೂಲಕ್ಕಾಗಿ ಒಂದು ವ್ಯವಸ್ಥೆಯನ್ನು ಆರಂಭಿಸಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ (TTD) ಈ ವಿನೂತನ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಭಕ್ತರಿಗೆ ಯಾವುದೇ ಅಡೆತಡೆಯಿಲ್ಲದೆ ಅನ್ನಪ್ರಸಾದ ಒದಗಿಸುವ ನಿಟ್ಟಿನಲ್ಲಿ, ವಿಮಾನ ನಿಲ್ದಾಣಗಳಲ್ಲಿ ಲಗೇಜ್ ಬರುವ ಕನ್ವೇಯರ್ ಬೆಲ್ಟ್ ಮಾದರಿಯಲ್ಲಿ ‘ಮೂವಿಂಗ್ ಟೇಬಲ್’ (ಚಲಿಸುವ ಟೇಬಲ್) ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.














