ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟ್ವೀಟ್: ಬಿಜೆಪಿ ನಾಯಕ ಅಮಿತ್ ಮಾಳವಿಯಾ ವಿರುದ್ಧ ಎಫ್‌ಐಆರ್ ದಾಖಲು | FIR Filed Against BJP IT Cell Chief Amit Malviya in Bengaluru for Tweet on Rahul Gandhi

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A 120b 505(2), 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಕಾಂಗ್ರೆಸ್ ಭಾರಿ ವಿರೋಧ ವ್ಯಕ್ತಪಡಿಸಿತ್ತು. ರಾಹುಲ್ ಗಾಂಧಿಯನ್ನು ಅವಮಾನಿಸುವ ದುರುದ್ದೇಶದಿಂದ ಟ್ವೀಟ್ ಮಾಡಲಾಗಿದೆ ಎಂದು ದೂರು ನೀಡಿದ್ದರು. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Source link