Last Updated:
ದೇವದತ್ ಪಡಿಕ್ಕಲ್ ಶ್ರೀಲಂಕಾ ಇಲೆವೆನ್ ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸಿದ್ದಾರೆ. ಕೊಲೊಂಬೋದ ಎನ್‌ಸಿಸಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಎರಡನೇ ದಿನದಂದು ಅವರು ಈ ಸಾಧನೆ ಮಾಡಿದರು.
ಕೊಲಂಬೋದ ಎನ್‌ಸಿಸಿ (NCC) ಮೈದಾನದಲ್ಲಿ ಶ್ರೀಲಂಕಾ ಇಲೆವೆನ್ (IND vs SL-XI, Warm Up TEST) ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ತೋರಿದೆ. ಅದರಲ್ಲೂ ಕನ್ನಡಿಗ ದೇವದತ್ ಪಡಿಕ್ಕಲ್ ಶತಕ ಸಿಡಿಸಿ ಅಮೋಘ ಪ್ರದರ್ಶನ ನೀಡಿದರು. ಈ ಭರ್ಜರಿ ಶತಕ ಸಿಡಿಸುವ ಮೂಲಕ ಮುಂಬರುವ ಟೆಸ್ಟ್ ಸರಣಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲು ಪಡಿಕ್ಕಲ್ ಅಪ್ಲಿಕೇಶನ್ ಹಾಕಿದ್ದಾರೆ.














