ತೋಟಗಾರಿಕೆಯ ವಿವಿಧ ಬೆಳೆಗಳಿಗೂ ಬೆಳೆ ವಿಮೆ ಮಾಡಿಸಿ | Register For Crop Insurance Scheme For Horticulture Crops

Agriculture

oi-Gururaj S

|

Google Oneindia Kannada News

ಬಳ್ಳಾರಿ, ಜೂನ್ 28; ಈ ಬಾರಿಯ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಕೃಷಿ ಇಲಾಖೆ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಿ ಎಂದು ಕರೆ ನೀಡಿದ್ದಾರೆ. ಈಗ ತೋಟಗಾರಿಕಾ ಬೆಳೆಗಳಿಗೂ ವಿಮೆ ಮಾಡಿಸಲು ಮನವಿ ಮಾಡಲಾಗಿದೆ.

ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಅನ್ವಯ 2023-24ನೇ ಸಾಲಿಗೆ ತೋಟಗಾರಿಕೆಯ ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.

Register For Crop Insurance Scheme For Horticulture Crops

ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ (ಹಳ್ಳಿ, ಗ್ರಾಮ ಪಂಚಾಯಿತಿ, ಹೋಬಳಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯು ನೆರವಾಗಲಿದೆ ಎಂದು ಹೇಳಿದ್ದಾರೆ.

ಯೋಜನೆಯಡಿ ಒಳಪಡುವ ಬೆಳೆಗಳು; ಈ ಯೋಜನೆಯಡಿ ಬಳ್ಳಾರಿ ಜಿಲ್ಲೆಗೆ ಕೆಂಪು ಮೆಣಸಿನಕಾಯಿ (ನೀರಾವರಿ). ಬೆಳೆಯು ವಿಮಾ ಪ್ರದೇಶದಲ್ಲಿ ಒಳಪಡುವ ಹೋಬಳಿಗಳು ಕಂಪ್ಲಿ, ಕುರುಗೋಡು, ಕೋಳೂರು, ಬಳ್ಳಾರಿ, ಮೋಕಾ, ರೂಪನಗುಡಿ, ಕರೂರು, ತೆಕ್ಕಲಕೋಟೆ, ಸಿರುಗುಪ್ಪ, ಹಚ್ಚಳ್ಳಿ, ತೋರಣಗಲ್ಲು.

ಈರುಳ್ಳಿ (ನೀರಾವರಿ) ಬೆಳೆಯು ಒಳಪಡುವ ಹೋಬಳಿಗಳು ಸಂಡೂರು, ಚೋರನೂರು, ತೋರಣಗಲ್ಲು ಪ್ರದೇಶಗಳು ಒಳಪಡಲಿವೆ ಎಂದು ರೈತರಿಗೆ ಮಾಹಿತಿ ನೀಡಲಾಗಿದೆ.

ವಿಮಾ ಕಂತು ಮತ್ತು ನೋಂದಣಿ ಅವಧಿ; ಕೆಂಪು ಮೆಣಸಿನಕಾಯಿ (ನೀರಾವರಿ) ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ರೂ.1,07,500 ಹಾಗೂ ಪ್ರತಿ ಹೆಕ್ಟೇರ್‌ಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ 5,375 ರೂ. ಆಗಿರುತ್ತದೆ. ವಿಮಾ ಮೊತ್ತ ಪಾವತಿಸಲು ಕೊನೆಯ ದಿನ ಜುಲೈ 31.

ಈರುಳ್ಳಿ (ನೀರಾವರಿ) ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ರೂ. 80,500 ಹಾಗೂ ಪ್ರತಿ ಹೆಕ್ಟೇರ್‌ಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ 4,025 ರೂ. ಆಗಿರುತ್ತದೆ. ವಿಮಾ ಮೊತ್ತ ಪಾವತಿಸಲು ಕೊನೆಯ ದಿನ ಜುಲೈ 31 ಆಗಿದೆ.

ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿಯನ್ನು ಸಂಪರ್ಕಿಸಬಹುದು.

ಕರೆ ಮಾಡಲು ದೂರವಾಣಿ ಸಂಖ್ಯೆ ಬಳ್ಳಾರಿ ಮತ್ತು ಕುರುಗೊಡು ತಾಲೂಕು 08392-278177, 9480257282 ಹಾಗೂ ಸಂಡೂರು 08395-260389, 9740934208 ಮತ್ತು ಸಿರುಗುಪ್ಪ ಮತ್ತು ಕಂಪ್ಲಿ 08396-222066, 9448910277.

English summary

Farmers requested to register for crop insurance scheme for horticulture crops. Pradhanmantri fasal bima yojana will help farmers in case of crop loss.

Story first published: Wednesday, June 28, 2023, 13:02 [IST]

Source link