Last Updated:
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ಪ್ರಮುಖ ಜಲಾಶಯಗಳಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. KRS, ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ನಾರಾಯಣಪುರ ಸೇರಿದಂತೆ 14 ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಮತ್ತು ಒಳಹರಿವು-ಹೊರಹರಿವಿನ ಮಾಹಿತಿ ಇಲ್ಲಿದೆ.
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ (Rain) ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಭಾಗದ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಅನೇಕ ಡ್ಯಾಂಗಳು ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದು, ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಿದೆ. ಹಾರಂಗಿ, ಕಬಿನಿ, ಹೇಮಾವತಿ, ಆಲಮಟ್ಟಿ ಸೇರಿದಂತೆ ರಾಜ್ಯದ 14 ಪ್ರಮುಖ ಜಲಾಶಯಗಳ (Reservoir) ಇಂದಿನ ನಿಖರವಾದ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ.














