Last Updated:
ಮಹೇಶ್ ಬಾಬು ಅವರ ಸಮಾಜ ಸೇವೆಯ ಪ್ರಮುಖ ಭಾಗ ಮಹೇಶ್ ಬಾಬು ಫೌಂಡೇಶನ್. ಈ ಫೌಂಡೇಶನ್ ಮೂಲಕ ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡಿಸಲಾಗುತ್ತಿದೆ. ಇದುವರೆಗೆ 5000ಕ್ಕೂ ಹೆಚ್ಚು ಮಕ್ಕಳು ಈ ಸೇವೆಯ ಪ್ರಯೋಜನ ಪಡೆದಿದ್ದಾರೆ ಎಂದು ಲಭ್ಯವಿರುವ ಮಾಹಿತಿಯಲ್ಲಿ ಹೇಳಲಾಗಿದೆ.
ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಇಂದು ತಮ್ಮ 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೆಳ್ಳಿ ಪರದೆಯ ಮೇಲೆ ತಮ್ಮ ಅಭಿನಯ, ಸ್ಟೈಲ್ ಮತ್ತು ಸಿನಿಮಾಗಳ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಮಹೇಶ್ ಬಾಬು, ನಿಜ ಜೀವನದಲ್ಲೂ ತಮ್ಮ ಮಾನವೀಯ ಕೆಲಸಗಳಿಂದ ಗಮನ ಸೆಳೆದಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಸಿನಿಮಾಗಳ ಜೊತೆಗೆ ಅವರು ಹಲವು ವರ್ಷಗಳಿಂದ ಸದ್ದಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಮಾಜ ಸೇವಾ ಕಾರ್ಯಗಳು ಕೂಡ ಮತ್ತೊಮ್ಮೆ ಚರ್ಚೆಗೆ ಬಂದಿವೆ.














