Last Updated:
ಬಾಂಗ್ಲಾದೇಶದ ವೇಗದ ಬೌಲರ್ ಹಸನ್ ಮಹಮೂದ್ 55 ರನ್ಗಳಿಗೆ 6 ವಿಕೆಟ್ಗಳನ್ನು ಕಬಳಿಸಿದ ಕಾಂಗರೂಪಡೆಯನ್ನ ಧ್ವಂಸ ಮಾಡಿದರು. ಆಸ್ಟ್ರೇಲಿಯಾದ ಹಿರಿಯ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ 71 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಡಾರ್ವಿನ್: 2003ರ ನಂತರ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಮಾಡುತ್ತಿರುವ ಬಾಂಗ್ಲಾದೇಶ ತಂಡವು ಅದ್ಭುತ ಪ್ರದರ್ಶನ ನೀಡಿದೆ. ಡಾರ್ವಿನ್ನ ಮರ್ರಾರಾ(Marrara) ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಂದು ಆಸ್ಟ್ರೇಲಿಯಾ 198 ರನ್ಗಳಿಗೆ ಆಲೌಟ್ ಮಾಡಿದೆ. ಬಾಂಗ್ಲಾದೇಶದ ಯುವ ವೇಗದ ಬೌಲರ್ ಹಸನ್ ಮಹಮೂದ್ 55 ರನ್ಗಳಿಗೆ 6 ವಿಕೆಟ್ಗಳನ್ನು ಕಬಳಿಸಿ ಕಾಂಗರೂಪಡೆಯನ್ನ ಧ್ವಂಸ ಮಾಡಿದರು. ಆಸ್ಟ್ರೇಲಿಯಾದ ಹಿರಿಯ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ 71 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.














