Last Updated:
ಸ್ವಾತಂತ್ರ್ಯ ದಿನಾಚರಣೆ ರಜೆ ಹಿನ್ನೆಲೆ, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳ ನಿರೀಕ್ಷೆ. BLR ಏರ್ಪೋರ್ಟ್ ನಿಂದ ಪ್ರಯಾಣಿಕರಿಗೆ ಮುಂಚಿತವಾಗಿ ಆಗಮಿಸಲು ಸಲಹೆ.
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ (Independence Day Celebration) ಸಂಭ್ರಮ ಹಾಗೂ ವಾರದ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯು ತೀವ್ರವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಈ ಕುರಿತಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR Airport) ಆಡಳಿತ ಮಂಡಳಿಯು ಅಧಿಕೃತವಾಗಿ ಪ್ರಮುಖ ಪ್ರಯಾಣಿಕರ ಸಲಹೆಯನ್ನು (Passenger Advisory) ಬಿಡುಗಡೆ ಮಾಡಿದೆ. ಪ್ರಯಾಣಿಕರು ವಿಮಾನ (Flight) ನಿಲ್ದಾಣಕ್ಕೆ ಬರುವ ಮುನ್ನ ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯವಾಗಿದೆ.














