Last Updated:
ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಮೃತದೇಹ ಅವರ ಮನೆಯಲ್ಲಿರುವ ಟಿಎಂಸಿ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಂಪುರ್ಹತ್‌ನಲ್ಲಿರುವ ಬ್ಯಾನರ್ಜಿ ನಿವಾಸದ ಬಳಿ ಇರುವ ಪಕ್ಷದ ಕಚೇರಿಯಿಂದ ಆತ್ಮಹತ್ಯೆ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಕೆಲವು ಮುಖ್ಯ ವಿಚಾರಗಳನ್ನು ಬರೆದಿದ್ದಾರೆ.
ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ ( Ashis Banerjee) ನಿಧನರಾಗಿದ್ದಾರೆ. ಆಶಿಶ್ ಬ್ಯಾನರ್ಜಿ ಅವರ ಮೃತದೇಹ ಭಾನುವಾರ ಬಿರ್ಭುಮ್ ಜಿಲ್ಲೆಯ ರಾಂಪುರ್ಹತ್‌ನಲ್ಲಿರುವ ಅವರ ನಿವಾಸದಲ್ಲಿರುವ ಅವರ ಕಚೇರಿಯಲ್ಲಿ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಕಂಡುಬಂದಿದೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.














