[ad_1]
Last Updated:
ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ, ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ 3 ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆಗೆ ಸೇರಿದ್ದಾರೆ.
ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಟೆಸ್ಟ್ ಕ್ರಿಕೆಟ್ನಲ್ಲಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ನ 3ನೇ ದಿನ ಸುದೀರ್ಘ ಮಾದರಿಯಲ್ಲಿ 350 ವಿಕೆಟ್ ಪೂರ್ಣಗೊಳಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ 350 ವಿಕೆಟ್ಗಳ ಜೊತೆಗೆ 4000 ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಆಲ್ರೌಂಡರ್ ಎಂಬ ಹೆಗ್ಗಳಿಕೆಗೂ ಜಡ್ಡು ಪಾತ್ರರಾದರು. ಗಾಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಈ ಸಾಧನೆ ಮಾಡಿದರು. ಜಡೇಜಾ ಶ್ರೀಲಂಕಾ ತಂಡದ ನಾಯಕ ಧನಂಜಯ ಡಿ ಸಿಲ್ವಾ, ಕೇಸರ ನುವಾಂತ ಹಾಗೂ ಶತಕವೀರ ಸೋನಾಲ್ ಧಿನುಷಾ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು.
[ad_2]
Source link














