Last Updated:
ಗಾಲೆ ಆಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಐತಿಹಾಸಿಕ 600ನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ತಂಡ ಕೇವಲ 193 ರನ್ಗಳಿಗೆ ಆಲೌಟ್ ಆಗಿದೆ.
ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಐತಿಹಾಸಿಕ 600ನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ತಂಡ ಕೇವಲ 193 ರನ್ಗಳಿಗೆ ಆಲೌಟ್ ಆಗಿದೆ. ಆದರೂ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಆತಿಥೇಯ ಶ್ರೀಲಂಕಾಗೆ ಗೆಲ್ಲಲು 372 ರನ್ಗಳ ಬೃಹತ್ ಗುರಿಯನ್ನು ನಿಗದಿಪಡಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ ಪಡೆದಿದ್ದ ದೊಡ್ಡ ಮುನ್ನಡೆಯ ಬಲದಿಂದಾಗಿ ಟೀಮ್ ಇಂಡಿಯಾ ಪಂದ್ಯದ ಮೇಲಿನ ಹಿಡಿತವನ್ನು ಬಿಗಿಗೊಳಿಸಿದೆ. ಸ್ಪಿನ್ ಬೌಲಿಂಗ್ ಅತ್ಯಂತ ಪರಿಣಾಮಕಾರಿಯಾಗುತ್ತಿರುವುದರಿಂದ ಈ ಪಂದ್ಯವನ್ನ ಭಾರತ ಗೆಲ್ಲುವ ಸಾಧ್ಯತೆ ಹೆಚ್ಚಿದೆ.














