Last Updated:
ಟಾಲಿವುಡ್ ನಟ ರಾಮ್ ಪೋತಿನೇನಿ (Ram Pothineni) ಇತ್ತೀಚಿನ ಕೆಲವು ಸಿನಿಮಾಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಇದೀಗ ಹೊಸ ಪ್ರಯತ್ನದೊಂದಿಗೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಟಾಲಿವುಡ್ ನಟ ರಾಮ್ ಪೋತಿನೇನಿ (Ram Pothineni) ಇತ್ತೀಚಿನ ಕೆಲವು ಸಿನಿಮಾಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಇದೀಗ ಹೊಸ ಪ್ರಯತ್ನದೊಂದಿಗೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿರುವ ರಾಮ್ ಪೋತಿನೇನಿ, ತಮ್ಮ ಚೊಚ್ಚಲ ನಿರ್ದೇಶನದ RAPO23 ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ಸಿನಿಮಾಗಾಗಿ ನಟ ಸತತ 24 ಗಂಟೆಗಳ ಕಾಲ ಚಿತ್ರೀಕರಣ ನಡೆಸಿರುವುದು ಇದೀಗ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿದೆ.














