Last Updated:
Narendra Modi: ಪ್ರಧಾನಿ ಮೋದಿಯವರೇ ಅಧ್ಯಕ್ಷತೆ ವಹಿಸಿದ್ದ ಈ ಸಭೆಯಲ್ಲಿ, ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ, ವಿದೇಶಾಂಗ ವ್ಯವಹಾರಗಳು ಮತ್ತು ಆಡಳಿತವನ್ನು ನಿರ್ವಹಿಸುವ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಕುರಿತು ಚರ್ಚಿಸಿದರು.
ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಿನ್ನೆ ತಮ್ಮ ನಿವಾಸದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ (Secretaries to the Government of India)( ಮೂರನೇ ಉನ್ನತ ಮಟ್ಟದ ಸಭೆ (3rd high-level meeting) ನಡೆಸಿದ್ರು. ಪ್ರಧಾನಿ ಮೋದಿಯವರೇ ಅಧ್ಯಕ್ಷತೆ ವಹಿಸಿದ್ದ ಈ ಸಭೆಯಲ್ಲಿ, ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ, ವಿದೇಶಾಂಗ ವ್ಯವಹಾರಗಳು ಮತ್ತು ಆಡಳಿತವನ್ನು ನಿರ್ವಹಿಸುವ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಕುರಿತು ಚರ್ಚಿಸಿದರು. ಸಭೆಯ ಸಂದರ್ಭದಲ್ಲಿ, ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ದೀರ್ಘಾವಧಿಯ ದೃಷ್ಟಿಕೋನದಿಂದ ಯೋಚಿಸುವಂತೆ ಪ್ರಧಾನಮಂತ್ರಿ ಕಾರ್ಯದರ್ಶಿಗಳಿಗೆ ಸಲಹೆ ನೀಡಿದ್ರು.














