Last Updated:
ಪೊಲೀಸ್ ಮೂಲಗಳ ಪ್ರಕಾರ, ಮೃತರ ಪತ್ನಿ ಭಾನುವಾರ ಮಧ್ಯಾಹ್ನ ಇಂಡಾಸ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಐದು ವ್ಯಕ್ತಿಗಳಲ್ಲಿ ಮೂವರು ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ.
ಬಂಕುರಾ: ಸರ್ಕಾರಿ ಶಾಲೆಯ ಕಳಪೆ ಸ್ಥಿತಿಯನ್ನು ಎತ್ತಿ ತೋರಿಸಿದ್ದಕ್ಕಾಗಿ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತ ಮತ್ತು ಆತನ ತಂದೆಯ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ತಂದೆ ಸಾವನ್ನಪ್ಪಿರುವ (CJP Volunteer’s Father Dies) ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.














