Last Updated:
ಸಾಮಾಜಿಕ ಜಾಲತಾಣದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿರುವ ಮೇಘಾ, ತಾನು ಅನೂಪ್ ಜೊತೆ ಗಂಡನ ಮನೆಯಿಂದ ಹೊರಬಂದಿರುವುದನ್ನು ಒಪ್ಪಿಕೊಂಡಿದ್ದಾರೆ.
ಕೇರಳದ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ (Akhil NRD) ಪತ್ನಿ ಮೇಘಾ ನಾಯರ್ (Megha Nair) ರಾತ್ರೋರಾತ್ರಿ ಮನೆ ತೊರೆದು ಖಾಸಗಿ ಬಸ್ ಚಾಲಕನೊಂದಿಗೆ ತೆರಳಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಸಿಸಿಟಿವಿ ದೃಶ್ಯಗಳು ಕೂಡ ಹರಿದಾಡಿದ್ದರಿಂದ ಪ್ರಕರಣದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಕೇಳಿಬಂದಿದ್ದವು. ಇದೀಗ ಮೇಘಾ ನಾಯರ್ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದು, ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.














