Last Updated:
ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kajia Liz Mejo) ‘ಮಿಸ್ ಯೂನಿವರ್ಸ್ ಇಂಡಿಯಾ 2026’ (Miss Universe India 2026) ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kajia Liz Mejo) ‘ಮಿಸ್ ಯೂನಿವರ್ಸ್ ಇಂಡಿಯಾ 2026’ (Miss Universe India 2026) ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಅದ್ದೂರಿ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ ಕಾಜಿಯಾ ಈ ಪ್ರತಿಷ್ಠಿತ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ನವೆಂಬರ್ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಕಾಜಿಯಾ ಪಾಲಾಗಿದೆ.














