Last Updated:
ಆಗಸ್ಟ್ 21ರ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಟಾಕ್ಸಿಕ್ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಬುಕಿಂಗ್ ಆರಂಭವಾದ ಕೇವಲ 48 ಗಂಟೆಗಳಲ್ಲೇ ಸಿನಿಮಾ 18 ಕೋಟಿ ರೂಪಾಯಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಯ ಮುನ್ನವೇ ಭರ್ಜರಿ ಸದ್ದು ಮಾಡುತ್ತಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ಚಿತ್ರಮಂದಿರಗಳಿಗೆ ಬರಲು ಸಜ್ಜಾಗಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ ಆರಂಭವಾಗಿರುವ ಅಡ್ವಾನ್ಸ್ ಬುಕಿಂಗ್ನಲ್ಲಿ ಟಾಕ್ಸಿಕ್ ಭರ್ಜರಿ ದಾಖಲೆ ನಿರ್ಮಿಸಿದ್ದು, ಭಾರತೀಯ ಚಿತ್ರರಂಗದ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳ ಮುಂಗಡ ಬುಕಿಂಗ್ ದಾಖಲೆಗಳನ್ನು ಹಿಂದಿಕ್ಕಿದೆ ಎನ್ನಲಾಗಿದೆ.














