Last Updated:
ಇಬ್ಬರು ಮಹಿಳಾ ಕಾನ್ಸ್ಟೇಬಲ್ಗಳು ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಬೇಕು ಎಂದು ನಿರ್ಧರಿಸಿದ್ದಾರೆ. ವೈದಿಕ ಸಂಪ್ರದಾಯದಂತೆ ಮದುವೆಯಾಗಲು ಈಗಾಗಲೇ ರಜೆಗೆ ಅರ್ಜಿ ಸಲ್ಲಿಸಿದ್ದಾರೆ.ಅಲ್ಲದೇ ಈ ಜೋಡಿಯಲ್ಲೊಬ್ಬರು ಲಿಂಗ ಪರಿವರ್ತನೆ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ.
ಇತ್ತೀಚಿಗೆ ಹುಡುಗಿ-ಹುಡುಗಿ ಮದುವೆಯಾಗುವುದು (Marriage), ಹುಡುಗ-ಹುಡುಗ ಮದುವೆಯಾಗುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಅದೇ ರೀತಿ ಇಲ್ಲೂ ಕೂಡ ಇಬ್ಬರು ಮಹಿಳಾ ಕಾನ್ಸ್ಟೇಬಲ್ಗಳು (Lady Constable) ಪರಸ್ಪರ ಪ್ರೀತಿಸಿ ಮದುವೆಯಾಗಬೇಕು ಎಂದು ನಿರ್ಧರಿಸಿದ್ದಾರೆ. ಪುಣೆ ಸಮೀಪದ ಪಿಂಪ್ರಿ-ಚಿಂಚವಾಡ ಪೊಲೀಸ್ ಆಯುಕ್ತಾಲಯದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗಳು ಈ ರೀತಿ ಮದುವೆಯಾಗಲು ನಿರ್ಧರಿಸಿದ್ದಾರೆ.














