Last Updated:
ಸೂರ್ಯ (Suriya) ಅಭಿನಯದ ಬಹುನಿರೀಕ್ಷಿತ ವಿಶ್ವನಾಥ್ ಅಂಡ್ ಸನ್ಸ್ (Vishwanath & Sons) ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕವೂ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ OTT ಬಿಡುಗಡೆ ಯಾವಾಗ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.
ಸೂರ್ಯ (Suriya) ಅಭಿನಯದ ಬಹುನಿರೀಕ್ಷಿತ ವಿಶ್ವನಾಥ್ ಅಂಡ್ ಸನ್ಸ್ (Vishwanath & Sons) ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕವೂ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಲಕ್ಕಿ ಭಾಸ್ಕರ್ ಸಿನಿಮಾ ಮೂಲಕ ಗಮನ ಸೆಳೆದ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶನದ ಈ ಫ್ಯಾಮಿಲಿ ಎಂಟರ್ಟೈನರ್ ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಸೂರ್ಯ ಜೊತೆಗೆ ಮಮಿತಾ ಬೈಜು, ರಾಧಿಕಾ ಹಾಗೂ ರವೀನಾ ಟಂಡನ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಚಿತ್ರದ OTT ಬಿಡುಗಡೆ ಯಾವಾಗ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.














