Last Updated:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಹುದಿನಗಳಿಂದ ಭಾರೀ ನಿರೀಕ್ಷೆ ಮೂಡಿಸಿತ್ತು. ಚಿತ್ರದ ಪೋಸ್ಟರ್, ಟೀಸರ್, ಟ್ರೇಲರ್ ಮತ್ತು ಪ್ರಚಾರದ ಅಪ್ಡೇಟ್ಗಳು ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸುತ್ತಲೇ ಬಂದಿದ್ದವು. ಇದೀಗ ಕೊನೆಗೂ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಿದೆ.
ನಾನ್ ಬರೋವರೆಗೆ ಬೇರೆಯವರ ಹವಾ, ನಾನು ಬಂದ್ಮೇಲೆ ನಂದೇ ಹವಾ ಎಂಬ ಡೈಲಾಗ್ಗೆ ತಕ್ಕಂತೆ ರಾಕಿಂಗ್ ಸ್ಟಾರ್ ಯಶ್ (Rocking Star Yash) ಮತ್ತೊಮ್ಮೆ ಸದ್ದು ಮಾಡಲು ಸಜ್ಜಾಗಿದ್ದಾರೆ. ಬಹುದಿನಗಳಿಂದ ಟಾಕ್ಸಿಕ್ಗಾಗಿ (Toxic) ಕಾದಿದ್ದ ಅಭಿಮಾನಿಗಳ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, ಸಿನಿಮಾ ವಿಶ್ವದಾದ್ಯಂತ ಭರ್ಜರಿಯಾಗಿ ರಿಲೀಸ್ ಆಗಿದೆ. ಕೆಜಿಎಫ್ ಬಳಿಕ ಯಶ್ ಮತ್ತೊಂದು ಪ್ಯಾನ್ ಇಂಡಿಯಾ ಪ್ರಯತ್ನವಾಗಿರುವ ಟಾಕ್ಸಿಕ್ ಮೇಲೆ ಅಭಿಮಾನಿಗಳಷ್ಟೇ ಅಲ್ಲ, ಸಿನಿಮಾ ವಲಯದ ಕಣ್ಣು ಕೂಡ ನೆಟ್ಟಿದೆ.














