Last Updated:
Narendra Modi: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕಡಿಮೆಯಾಗಿದೆ ಅಂತ ವಿರೋಧ ಪಕ್ಷಗಳು ಆರೋಪಿಸುತ್ತಿದ್ದವು. ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ಮುಂದಿಟ್ಟುಕೊಂಡು ಜೆನ್ ಝಡ್ ಯುವಕರು ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಅದೆಲ್ಲವೂ ಸುಳ್ಳು ಅಂತ ಸಿ ವೋಟರ್ ಸಮೀಕ್ಷೆ ಹೇಳಿದೆ.
ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Prime Minister Narendra Modi) ಜನಪ್ರಿಯತೆ ಕಡಿಮೆಯಾಗಿದೆ ಅಂತ ವಿರೋಧ ಪಕ್ಷಗಳು ಆರೋಪಿಸುತ್ತಿದ್ದವು. ಜಂತರ್ ಮಂತರ್ನಲ್ಲಿ ಸಿಜೆಪಿ (CJP) ಪ್ರತಿಭಟನೆ ಮುಂದಿಟ್ಟುಕೊಂಡು ಜೆನ್ ಝಡ್ (Gen Z) ಯುವಕರು ಮೋದಿ ವಿರುದ್ಧ ಸಿಡಿದೆದ್ದಿದ್ದಾರೆ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಅದೆಲ್ಲವೂ ಸುಳ್ಳು ಅಂತ ಸಿ ವೋಟರ್ ಸಮೀಕ್ಷೆ ಹೇಳಿದೆ. ಇಂಡಿಯಾ ಟುಡೇ ಹಾಗೂ ಸಿ ವೋಟರ್ (CVoter) ನಡೆಸಿದ ಮೂಡ್ ಆಫ್ ದಿ ನೇಷನ್ (Mood of the Nation) ಸರ್ವೆಯಲ್ಲಿ ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿಯವರೇ ಮತ್ತೆ ಮೊದಲ ಆಯ್ಕೆ ಅಂತ ಹೇಳಿದೆ. ಅಷ್ಟೇ ಅಲ್ಲ, ಇಂದು ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್ಡಿಎಗೆ 326 ಸೀಟುಗಳನ್ನು ಪಡೆಯಲಿದೆ ಅಂತ ಸಮೀಕ್ಷೆ ಬಹಿರಂಗಪಡಿಸಿದೆ.














