Last Updated:
ಹನುಮಾನ್ ಅಂಶ್ (Hanuman Ansh) ಸಿನಿಮಾ ಯಾವುದೇ ದೊಡ್ಡ ನಿರೀಕ್ಷೆಗಳಿಲ್ಲದೆ ಚಿತ್ರಮಂದಿರಗಳಿಗೆ ಬಂದರೂ, ಇದೀಗ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ.
ನೀಮ್ ಕರೋಲಿ ಬಾಬಾ (Neem Karoli Baba) ಜೀವನ ಮತ್ತು ಆಧ್ಯಾತ್ಮಿಕತೆಯನ್ನು ಆಧರಿಸಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಯಾವುದೇ ದೊಡ್ಡ ನಿರೀಕ್ಷೆಗಳಿಲ್ಲದೆ ಚಿತ್ರಮಂದಿರಗಳಿಗೆ ಬಂದರೂ, ಇದೀಗ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಕೇವಲ ₹1.8 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ದೊಡ್ಡ ಸ್ಟಾರ್ ನಟರಿಲ್ಲ, ಅದ್ಧೂರಿ ತಾಂತ್ರಿಕ ತಂಡವೂ ಇಲ್ಲ. ಆದರೂ ಪ್ರೇಕ್ಷಕರ ಮೆಚ್ಚುಗೆ ಪಡೆದು ದಿನದಿಂದ ದಿನಕ್ಕೆ ತನ್ನ ಪ್ರದರ್ಶನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಸಿನಿಮಾ, ಕೇವಲ 20 ದಿನಗಳಲ್ಲಿ ₹12 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಈ ಮೂಲಕ ಕಡಿಮೆ ಬಜೆಟ್‌ನಲ್ಲಿ ಅತಿದೊಡ್ಡ ಲಾಭ ಗಳಿಸಿದ ಸಿನಿಮಾಗಳ ಸಾಲಿಗೆ ಹನುಮಾನ್ ಅಂಶ್ ಸೇರ್ಪಡೆಯಾಗಿದೆ.














