Last Updated:
ಪಾಕಿಸ್ತಾನ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 24 ರನ್ ಗಳಿಸುವ ಮೂಲಕ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್‌ನಲ್ಲಿ ಅವರ ಒಟ್ಟು 7,594 ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು, ಈ ದಾಖಲೆಯನ್ನು ಆಸ್ಟ್ರೇಲಿಯಾದ ದಂತಕಥೆ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ರಿಕಿ ಪಾಂಟಿಂಗ್ ಹೊಂದಿದ್ದರು.
ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ (Joe Root) ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪಾಕಿಸ್ತಾನ ವಿರುದ್ಧದ (Pakistan vs England) ಲಾರ್ಡ್ಸ್ ಟೆಸ್ಟ್‌ನ (Lord’s) ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್ ಗಳಿಸುವ ಮೂಲಕ ರೂಟ್, ರಿಕಿ ಪಾಂಟಿಂಗ್ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅವರು ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ರೂಟ್ ಈಗಾಗಲೇ ಈ ಪಟ್ಟಿಯಲ್ಲಿ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಮೀರಿಸಿದ್ದರು. ರೂಟ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 24 ರನ್ ಗಳಿಸಿ ಔಟ್ ಆದರು.














