Last Updated:
ಈ ಪಂದ್ಯದಲ್ಲಿ ಜಿಂಬಾಬ್ವೆ ನೀಡಿದ್ದ 145 ರನ್ಗಳ ಗುರಿಯನ್ನು ದಕ್ಷಿಣ ಆಫ್ರಿಕಾ 13.4 ಓವರ್ಗಳಲ್ಲಿ ಕೇವಲ 3 ವಿಕೆಟ್ಗಳನ್ನು ಕಳೆದುಕೊಂಡು ತಲುಪಿತು. ನಿನ್ನೆ 75 ರನ್ಗಳಿಸಿಯೂ ತಂಡವನ್ನ ಗೆಲುವಿನ ಗಡಿ ದಾಟಿಸಲು ವಿಫಲರಾಗಿದ್ದ ಡೆವಾಲ್ಡ್ ಬ್ರೆವಿಸ್ ಇಂದು ಅಜೇಯ 75 ರನ್ಗಳನ್ನು ಗಳಿಸಿ ಗೆಲುವಿನ ರೂವಾರಿಯಾದರು.
ನಮೀಬಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ ತಂಡ ಅದ್ಭುತ ಕಮ್ಬ್ಯಾಕ್ ಮಾಡಿದ್ದು, ಟಿ20 ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆಯನ್ನು 7 ವಿಕೆಟ್ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. ಈ ಪಂದ್ಯದಲ್ಲಿ ಜಿಂಬಾಬ್ವೆ ನೀಡಿದ್ದ 145 ರನ್ಗಳ ಗುರಿಯನ್ನು ದಕ್ಷಿಣ ಆಫ್ರಿಕಾ 13.4 ಓವರ್ಗಳಲ್ಲಿ ಕೇವಲ 3 ವಿಕೆಟ್ಗಳನ್ನು ಕಳೆದುಕೊಂಡು ತಲುಪಿತು. ನಿನ್ನೆ 75 ರನ್ ಗಳಿಸಿಯೂ ತಂಡವನ್ನ ಗೆಲುವಿನ ಗಡಿ ದಾಟಿಸಲು ವಿಫಲರಾಗಿದ್ದ ಡೆವಾಲ್ಡ್ ಬ್ರೆವಿಸ್ ಇಂದು ಅಜೇಯ 75 ರನ್ಗಳನ್ನು ಗಳಿಸಿ ಗೆಲುವಿನ ರೂವಾರಿಯಾದರು.














