Last Updated:
ಡಿಸಿ ಸಿನಿಮಾ ಆಗಸ್ಟ್ 7ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಆರಂಭದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇರದಿದ್ದರೂ, ಸಿನಿಮಾ ಬಿಡುಗಡೆಯಾದ ನಂತರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು.
ಖೈದಿ ಮತ್ತು ವಿಕ್ರಮ್ನಂತಹ ಸಿನಿಮಾಗಳ ಮೂಲಕ ನಿರ್ದೇಶಕರಾಗಿ ದೊಡ್ಡ ಕ್ರೇಜ್ ಸಂಪಾದಿಸಿರುವ ಲೋಕೇಶ್ ಕನಕರಾಜ್ (Lokesh Kanagaraj), ಈ ಬಾರಿ ನಾಯಕನಾಗಿ ಕಾಣಿಸಿಕೊಂಡಿರುವ ಡಿಸಿ ಸಿನಿಮಾ (DC Movie) ಪ್ರೇಕ್ಷಕರ ಗಮನ ಸೆಳೆದಿದೆ. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಆ್ಯಕ್ಷನ್ ಡ್ರಾಮಾ ಸಿನಿಮಾ ಬಿಡುಗಡೆಯಾದ ಬಳಿಕ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಇದೀಗ ಒಟಿಟಿ ಪ್ರೇಮಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಚಿತ್ರತಂಡ ಡಿಜಿಟಲ್ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದು, ಸೆಪ್ಟೆಂಬರ್ 4ರಿಂದ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ.














