Last Updated:
ಇನ್ಸ್ಟಾಗ್ರಾಮ್ ಮತ್ತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಪ್ರಧಾನಿ ಮೋದಿ, ಜಾಗತಿಕ ಸವಾಲುಗಳ ಹೊರತಾಗಿಯೂ, ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ ಎಂಬುದನ್ನು ಈ ಪರ್ಫಾರ್ಮೆನ್ಸ್ ಸಾಬೀತುಪಡಿಸುತ್ತದೆ ಎಂದು ಹೇಳಿದರು.
ನವದೆಹಲಿ: ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಬೆಳವಣಿಗೆ (India’s GDP Rate) ದರ ನಿರೀಕ್ಷೆಗಿಂತ ಉತ್ತಮವಾಗಿ ಶೇ. 7.8 ಕ್ಕೆ ತಲುಪಿದ ನಂತರ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದ ಆರ್ಥಿಕತೆಯ ಪ್ರಭಾವಶಾಲಿ ಮುನ್ನಡೆಯನ್ನು ಬಹಿರಂಗವಾಗಿ ಶ್ಲಾಘಿಸಿದ್ದಾರೆ.














