Last Updated:
IPL 2026: ರಾಜಸ್ಥಾನ್ ರಾಯಲ್ಸ್ ಆರಂಭಿಕರ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಸಂಘಟಿತ ಪ್ರದರ್ಶನದಿಂದ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಆದರೆ ಮುಂಬೈ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 175 ರನ್ಗಳಿಸಲಷ್ಟೇ ಶಕ್ತವಾಗಿ 30 ರನ್ಗಳ ಸೋಲು ಕಂಡಿತು.
ಪ್ಲೇಆಫ್ ನಿರ್ಧರಿಸುವ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ (MI) ರನ್ಗಳ ಜಯ ಸಾಧಿಸಿ ನೇರವಾಗಿ ಪ್ಲೇಆಫ್ ಪ್ರವೇಶಿಸಿದೆ. ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆದ ಈ ಹೈವೋಲ್ಟೇಜ್ ಸಮರದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ಆರಂಭಿಕರ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಸಂಘಟಿತ ಪ್ರದರ್ಶನದಿಂದ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. 206 ರನ್ಗಳ ಗುರಿಯನ್ನ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ಗಳಿಸಲಷ್ಟೇ ಶಕ್ತವಾಗಿ 30 ರನ್ಗಳ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತು. ಇತ್ತ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕಗಳೊಂದಿಗೆ 4ನೇ ತಂಡವಾಗಿ ನೇರವಾಗಿ ಪ್ಲೇಆಫ್ ಪ್ರವೇಶಿಸಿತು. ರಾಜಸ್ಥಾನ್ ರಾಯಲ್ಸ್ ಗೆಲ್ಲುತ್ತಿದ್ದಂತೆ ಅತ್ತ ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಟೂರ್ನಿಯಿಂದ ಹೊರಬಿದ್ದವು.
206 ರನ್ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಇಂದೂ ಕೂಡ ಕಳಪೆ ಆರಂಭ ಪಡೆದುಕೊಂಡಿತು. ಪವರ್ ಪ್ಲೇ ಮುಗಿಯುವುದರೊಳಗೆ 4 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಚೇಸಿಂಗ್ ಆರಂಭಿಸಿದ ಮುಂಬೈಗೆ ಆರ್ಚರ್ ಮೊದಲ ಓವರ್ನಲ್ಲೇ ಶಾಕ್ ಕೊಟ್ಟರು. ರೋಹಿತ್ ಶರ್ಮಾರನ್ನ ಡಕ್ ಔಟ್ ಮಾಡಿ ಬ್ರೇಕ್ ನೀಡಿದರು. 3ನೇ ಓವರ್ನಲ್ಲಿ ಮತ್ತೆ ಬಂದ ಆರ್ಚರ್ 6 ರನ್ಗಳಿಸಿದ್ದ ನಮನ್ ಧೀರ್ರನ್ನ ಬೌಲ್ಡ್ ಮಾಡಿ ಡಬಲ್ ಶಾಕ್ ಕೊಟ್ಟರು. ರಿಕಲ್ಟನ್ 7 ಎಸೆತಗಳಲ್ಲಿ ತಲಾ 1 ಬೌಂಡರಿ, ಸಿಕ್ಸರ್ ಸಹಿತ 12 ರನ್ಗಳಿಸಿ ನಾಂಡ್ರೆ ಬರ್ಗರ್ಗೆ ವಿಕೆಟ್ ಒಪ್ಪಿಸಿದರು. ತಿಲಕ್ ವರ್ಮಾ ಕೂಡ ಹೆಚ್ಚು ಸಮಯ ಕ್ರೀಸ್ನಲ್ಲಿ ನಿಲ್ಲಲಿಲ್ಲ. 7 ಎಸೆತಗಳಲ್ಲಿ 3 ರನ್ ಸಿಡಿಸಿ ಬ್ರಿಜೇಶ್ ಶರ್ಮಾ ಬೌಲಿಂಗ್ನಲ್ಲಿ ಬೌಲ್ಡ್ ಆದರು.
38 ರನ್ಗಳಾಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿದ್ದ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ಕಾಣಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಸೂರ್ಯಕುಮಾರ್ ಯಾದವ್ ಹಾಗೂ ವಿಲ್ ಜಾಕ್ಸ್ 63 ರನ್ಗಳ ಜೊತೆಯಾಟ ನೀಡಿ ಪಂದ್ಯದಲ್ಲಿ ಮತ್ತೆ ಕಮ್ಬ್ಯಾಕ್ ಮಾಡುವಂತೆ ಮಾಡಿದರು.













