Last Updated:
ದೇಶದಲ್ಲಿ ನಿಧಾನವಾಗಿ ಆರಂಭಗೊಂಡು ಬಾಕ್ಸಾಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ಭಕ್ತಿಪ್ರಧಾನ ಸಿನಿಮಾ ಹನುಮಾನ್ ಅಂಶ್ (Hanuman Ansh) ಚಿತ್ರದ ವಿದೇಶಿ ವಿತರಣೆಯ ಜವಾಬ್ದಾರಿಯನ್ನು ಕೆಜಿಎಫ್ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ವಹಿಸಿಕೊಂಡಿದೆ.
ಭಾರತೀಯ ಚಿತ್ರರಂಗದ ಕಥೆಗಳು ಮತ್ತು ಭಾರತೀಯ ಸಂಸ್ಕೃತಿಯನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಹೊಂಬಾಳೆ ಫಿಲ್ಮ್ಸ್ (Hombale Films) ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ನಿಧಾನವಾಗಿ ಆರಂಭಗೊಂಡು ಬಾಕ್ಸಾಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ಭಕ್ತಿಪ್ರಧಾನ ಸಿನಿಮಾ ಹನುಮಾನ್ ಅಂಶ್ (Hanuman Ansh) ಚಿತ್ರದ ವಿದೇಶಿ ವಿತರಣೆಯ ಜವಾಬ್ದಾರಿಯನ್ನು ಕೆಜಿಎಫ್ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ವಹಿಸಿಕೊಂಡಿದೆ. ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಈ ಸಿನಿಮಾ ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಡಲು ಸಜ್ಜಾಗಿದೆ.














