Last Updated:
ಈ ಬಾರಿ ಬಿಗ್ ಬಾಸ್ ಮನೆ ಹೇಗಿರಲಿದೆ ಎಂಬ ಪ್ರಶ್ನೆಗೂ ಇದೀಗ ಉತ್ತರ ಸಿಕ್ಕಿದೆ. ಮನೆಯ ಮೊದಲ ಒಳಾಂಗಣ ದೃಶ್ಯಗಳು ಬಿಡುಗಡೆಯಾಗಿದ್ದು, ಮನೆಯ ವಿಭಿನ್ನ ವಿನ್ಯಾಸ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಟಿವಿ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಬಿಗ್ ಬಾಸ್ (Bigg Boss) 20ನೇ ಸೀಸನ್‌ಗೆ ಕ್ಷಣಗಣನೆ ಆರಂಭವಾಗಿದೆ. ಸಲ್ಮಾನ್ ಖಾನ್ (Salman Khan) ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸೀಸನ್ ಸೆಪ್ಟೆಂಬರ್ 6ರಂದು ಅದ್ಧೂರಿಯಾಗಿ ಆರಂಭವಾಗಲಿದೆ. ಸ್ಪರ್ಧಿಗಳು ಯಾರು ಎಂಬ ಕುತೂಹಲ ಒಂದೆಡೆಯಾದರೆ, ಈ ಬಾರಿ ಬಿಗ್ ಬಾಸ್ ಮನೆ ಹೇಗಿರಲಿದೆ ಎಂಬ ಪ್ರಶ್ನೆಗೂ ಇದೀಗ ಉತ್ತರ ಸಿಕ್ಕಿದೆ. ಮನೆಯ ಮೊದಲ ಒಳಾಂಗಣ ದೃಶ್ಯಗಳು ಬಿಡುಗಡೆಯಾಗಿದ್ದು, ಮನೆಯ ವಿಭಿನ್ನ ವಿನ್ಯಾಸ ಅಭಿಮಾನಿಗಳ ಗಮನ ಸೆಳೆಯುತ್ತಿದೆ.














