Last Updated:
ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಉಭಯ ತಂಡಗಳು ಒಟ್ಟು 17 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ ತಂಡ 14 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ 2026ರ ಮಹಿಳಾ ಟಿ20 ಏಷ್ಯಾ ಕಪ್ (Women’s T20 World Cup) ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗುತ್ತಿವೆ. ಇತಿಹಾಸವನ್ನು ಗಮನಿಸಿದರೆ, ಪಾಕಿಸ್ತಾನ ವಿರುದ್ಧ ಭಾರತ ಮಹಿಳಾ ತಂಡವು ಭಾರೀ ಅಂತರದ ದಾಖಲೆಯೊಂದಿಗೆ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಈ ಬಾರಿಯೂ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯುತ್ತಿದೆ.














