Last Updated:
ಕೆಜಿಎಫ್-3 ಯಾವಾಗ ಬರುತ್ತದೆ ಎಂಬ ಪ್ರಶ್ನೆಗೆ ನಿರ್ದೇಶಕ ಪ್ರಶಾಂತ್ ನೀಲ್ ನೀಡಿರುವ ಹೇಳಿಕೆ ಅಭಿಮಾನಿಗಳಲ್ಲಿ ಮತ್ತೊಮ್ಮೆ ಕುತೂಹಲ ಹೆಚ್ಚಿಸಿದೆ.
ರಾಕಿಂಗ್ ಸ್ಟಾರ್ ಯಶ್ (Rocking Star Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಭಾರಿ ನಿರೀಕ್ಷೆಗಳೊಂದಿಗೆ ತೆರೆಕಂಡಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ಯಶ್ ನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಆಗಿಸಿದ ಕೆಜಿಎಫ್ ಸರಣಿಯ ಮುಂದಿನ ಭಾಗದ ಬಗ್ಗೆ ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಕೆಜಿಎಫ್-3 (KGF-3) ಯಾವಾಗ ಬರುತ್ತದೆ ಎಂಬ ಪ್ರಶ್ನೆಗೆ ನಿರ್ದೇಶಕ ಪ್ರಶಾಂತ್ ನೀಲ್ ನೀಡಿರುವ ಹೇಳಿಕೆ ಅಭಿಮಾನಿಗಳಲ್ಲಿ ಮತ್ತೊಮ್ಮೆ ಕುತೂಹಲ ಹೆಚ್ಚಿಸಿದೆ.














