Last Updated:
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ (MA Chidambaram Stadium, Chennai) ನಡೆದ ದುಲೀಪ್ ಟ್ರೋಫಿ 2026 ರ ಫೈನಲ್ (Duleep Trophy 2026) ಪಂದ್ಯದಲ್ಲಿ ದಕ್ಷಿಣ ವಲಯದ ವಿರುದ್ಧ ಪೂರ್ವ ವಲಯ ಮೊದಲ ಇನಿಂಗ್ಸ್‌ನಲ್ಲಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಪ್ರತಿಷ್ಠಿತ ದುಲೀಪ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇಶಾನ್ ಕಿಶನ್ (Ishan Kishan) ನೇತೃತ್ವದ ಪೂರ್ವ ವಲಯ ತಂಡವು (East Zone vs South Zone) ದೇಶಿ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ (MA Chidambaram Stadium, Chennai) ನಡೆದ ದುಲೀಪ್ ಟ್ರೋಫಿ 2026 ರ ಫೈನಲ್ (Duleep Trophy 2026) ಪಂದ್ಯದಲ್ಲಿ ದಕ್ಷಿಣ ವಲಯದ ವಿರುದ್ಧ ಪೂರ್ವ ವಲಯ ಮೊದಲ ಇನಿಂಗ್ಸ್‌ನಲ್ಲಿ ಭಾರಿ ಮುನ್ನಡೆ ಸಾಧಿಸುವ ಮೂಲಕ ಪ್ರತಿಷ್ಠಿತ ದುಲೀಪ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ 13 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪೂರ್ವ ವಲಯ ತಂಡವು ಮತ್ತೊಮ್ಮೆ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದ ಐದನೇ ಹಾಗೂ ಅಂತಿಮ ದಿನದಂದು ಪಂದ್ಯವನ್ನ ಡ್ರಾ ಎಂದು ಘೋಷಿಸುತ್ತಿದ್ದಂತೆ ಈಸ್ಟ್ ಝೋನ್ ಆಟಗಾರರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.














