Last Updated:
ಮಹಿಳಾ ಟಿ20 ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಭಾರತ 40 ರನ್ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ದುಬೈ: ಇಲ್ಲಿನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಟಿ20 ಏಷ್ಯಾ ಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 40 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಟೂರ್ನಿಯಲ್ಲಿ ತನ್ನ ಅಜೇಯ ಯಾತ್ರೆಯನ್ನು ಮುಂದುವರಿಸಿ ಹೆಮ್ಮೆಯಿಂದ ಫೈನಲ್ ಬಾಗಿಲು ತಟ್ಟಿದೆ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಶಫಾಲಿ ವರ್ಮಾ(64)ರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ6 ವಿಕೆಟ್ ಕಳೆದುಕೊಂಡು 149 ರನ್ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ಮಹಿಳಾ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 109 ರನ್ಗಳಿಸಿ ಸೋಲೊಪ್ಪಿಕೊಂಡಿತು.














