Last Updated:
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಸುಲಭ ಜಯ ಸಾಧಿಸಿದೆ.
ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಸುಲಭ ಜಯ ಸಾಧಿಸಿದೆ. ಅಫ್ಘಾನಿಸ್ತಾನ ನೀಡಿದ್ದ 157 ರನ್ಗಳ ಸಾಧಾರಣ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ ಅಭಿಷೇಕ್ ಶರ್ಮಾರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಕೇವಲ 13.4 ಓವರ್ಗಳಲ್ಲಿ ಗುರಿ ತಲುಪಿತು. ಅಫ್ಘಾನ್ ದಾಳಿಯನ್ನ ಪುಡಿಗಟ್ಟಿದ ಅಭಿಷೇಕ್ ಕೇವಲ 32 ಎಸೆತಗಳಲ್ಲಿ 82 ರನ್ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇವರಿಗೆ ಸಾಥ್ ನೀಡಿದ ಇಶಾನ್ ಕಿಶನ್ 42 ರನ್ಗಳಿಸಿ ಭಾರತಕ್ಕೆ ಸುಲಭ ಗೆಲುವು ತಂದುಕೊಟ್ಟರು.












