Last Updated:
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ರಣಬಾಲಿ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಚಿತ್ರದಿಂದ ಹೊರಬಂದಿರುವ ಹೊಸ ಅಪ್‌ಡೇಟ್ ಅಭಿಮಾನಿಗಳ ಗಮನ ಸೆಳೆದಿದೆ.
ಟಾಲಿವುಡ್‌ನ ಜನಪ್ರಿಯ ಜೋಡಿಗಳಲ್ಲಿ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಹೆಸರು ಮುಂಚೂಣಿಯಲ್ಲಿದೆ. ತೆರೆಮೇಲೆ ಇವರಿಬ್ಬರ ಕೆಮಿಸ್ಟ್ರಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಗೀತ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಸಿನಿಮಾಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಈ ಜೋಡಿ ಇದೀಗ ಮತ್ತೊಮ್ಮೆ ಬೆಳ್ಳಿ ಪರದೆ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ರಣಬಾಲಿ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಚಿತ್ರದಿಂದ ಹೊರಬಂದಿರುವ ಹೊಸ ಅಪ್‌ಡೇಟ್ ಅಭಿಮಾನಿಗಳ ಗಮನ ಸೆಳೆದಿದೆ.














