Last Updated:
ವಿಮಲ್ ಪಾನ್ ಮಸಾಲ ಜಾಹೀರಾತಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಮಂಡಳಿ ನೀಡಿದ್ದ ಶೋಕಾಸ್ ನೋಟಿಸ್ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಪಾನ್ ಮಸಾಲ ಜಾಹೀರಾತಿಗೆ ಸಂಬಂಧಿಸಿದ ವಿವಾದದಲ್ಲಿ ಬಾಲಿವುಡ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಹಾಗೂ ಟೈಗರ್ ಶ್ರಾಫ್ (Tiger Shroff) ಅವರಿಗೆ ಸದ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ವಿಮಲ್ ಪಾನ್ ಮಸಾಲ ಜಾಹೀರಾತಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಮಂಡಳಿ ನೀಡಿದ್ದ ಶೋಕಾಸ್ ನೋಟಿಸ್ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಹಾಗೆಯೇ ನಟರ ಪರವಾಗಿ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.














