ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಬ್‌ಮನ್ ಗಿಲ್ ಅವರು ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ, ಏಷ್ಯನ್ ಗೇಮ್ಸ್ 2026 ಮುಗಿಸಿ ಜಪಾನ್‌ನಿಂದ ಮರಳಲಿರುವ ಶ್ರೇಯಸ್ ಅಯ್ಯರ್ ಅವರು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಭಾರತದ ಏಕದಿನ (ODI) ತಂಡದಲ್ಲಿ ಉಳಿಸಿಕೊಳ್ಳಲಾಗಿದ್ದು, ಅವರ ಜೊತೆಗೆ ಗುರ್ನೂರ್ ಬ್ರಾರ್, ಕೆ.ಎಲ್. ರಾಹುಲ್, ಪ್ರಸಿದ್ಧ್ ಕೃಷ್ಣ ಮತ್ತು ಕುಲದೀಪ್ ಯಾದವ್ ಕೂಡ ತಂಡದಲ್ಲಿದ್ದಾರೆ. ಇನ್ನು ಜುಲೈ 2026ರ ಇಂಗ್ಲೆಂಡ್ ಸರಣಿಯಲ್ಲಿ ಆಡದ ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಅವರು ಕೂಡ ತಂಡಕ್ಕೆ ಮರಳಿದ್ದಾರೆ.
ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ, ಏಕದಿನ ಸರಣಿಗೆ ಶುಭ್ಮನ್ ಗಿಲ್ ಅವರ ಉಪನಾಯಕನಾಗಿ ಕೆ.ಎಲ್. ರಾಹುಲ್ ಅವರನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ ಮತ್ತು ಯಶಸ್ವಿ ಜೈಸ್ವಾಲ್ ಕೂಡ ಇದ್ದಾರೆ.
ಜಡೇಜಾ ಹಾಗೂ ಸಿರಾಜ್ರಂತೆ ರಿಷಭ್ ಪಂತ್ ಕೂಡ ಏಕದಿನ ತಂಡಕ್ಕೆ ಮರಳಬಹುದು ಎನ್ನಲಾಗುತ್ತು. ಆದರೆ ಮ್ಯಾನೇಜ್ಮೆಂಟ್ ಪಂತ್ರನ್ನ ಎರಡನೇ ವಿಕೆಟ್ ಕೀಪರ್ ಸ್ಥಾನಕ್ಕೆ ಪರಿಗಣಿಸಿಲ್ಲ. ಯುವ ವಿಕೆಟ್ ಕೀಪರ್ ಧ್ರುವ್ ಜುರೆಲ್ಗೆ ಅವಕಾಶ ನೀಡಿದೆ. ಈ ಮೂಲಕ ಆಯ್ಕೆ ಸಮಿತಿ ವೈಟ್ ಬಾಲ್ ಕ್ರಿಕೆಟ್ಗೆ ಪಂತ್ರತ್ತ ಮತ್ತೆ ತಿರುಗಿ ನೋಡುತ್ತಿಲ್ಲ ಎಂಬುದು ಖಚಿತವಾಗಿದೆ. 2027ರ ವರೆಗೆ ಕೆಎಲ್ ರಾಹುಲ್ ತಂಡದ ಪ್ರಮುಖ ವಿಕೆಟ್ ಕೀಪರ್ ಆದರೆ, 2ನೇ ವಿಕೆಟ್ ಕೀಪರ್ ಸ್ಥಾನಕ್ಕೆ ಇಶಾನ್ ಕಿಶನ್ ಹಾಗೂ ಜುರೆಲ್ ನಡುವೆ ಸ್ಪರ್ಧೆ ನಡೆಯುತ್ತಿದೆ.
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ಉಪನಾಯಕ), ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಕಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (WK), ಸಂಜು ಸ್ಯಾಮ್ಸನ್ (WK), ತಿಲಕ್ ವರ್ಮಾ (VC), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್













