Anant Nag: ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಕನ್ನಡದ ಹಿರಿಯ ನಟನಿಗೆ ಮತ್ತೊಂದು ಪ್ರತಿಷ್ಠಿತ ಗೌರವ! | | ACTPnews

News18


Last Updated:

ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ 2024ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.

News18
News18

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ (Anant Nag) ಅವರ ದಶಕಗಳ ಸಿನಿ ಪಯಣಕ್ಕೆ ಇದೀಗ ಮತ್ತೊಂದು ಪ್ರತಿಷ್ಠಿತ ಗರಿ ಸಿಕ್ಕಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ 2024ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 16, 2026ರಂದು ಈ ಘೋಷಣೆ ಹೊರಬಿದ್ದಿದ್ದು, ಕನ್ನಡ ಚಿತ್ರರಂಗದ ಪಾಲಿಗೆ ಇದು ಮಹತ್ವದ ಗೌರವವಾಗಿದೆ.

ಅನಂತ್ ನಾಗ್ ಅವರು ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿರುವ ಹಿರಿಯ ನಟರಾಗಿದ್ದಾರೆ. ವಿಭಿನ್ನ ಬಗೆಯ ಪಾತ್ರಗಳನ್ನು ನಿರ್ವಹಿಸಿರುವ ಅವರು ಕನ್ನಡ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಭಾಗವಾಗಿ ಈ ಗೌರವವನ್ನು ಭಾರತೀಯ ಸಿನಿಮಾಗೆ ಗಮನಾರ್ಹ ಕೊಡುಗೆ ನೀಡಿದ ಸಾಧಕರಿಗೆ ನೀಡಲಾಗುತ್ತದೆ. 2024ನೇ ಸಾಲಿನ ಪ್ರಶಸ್ತಿ ವರ್ಷಕ್ಕೆ ಸಂಬಂಧಿಸಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅನಂತ್ ನಾಗ್ ಅವರಿಗೆ ಈ ಗೌರವ ಘೋಷಿಸಲಾಗಿದೆ.

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಅನಂತ್ ನಾಗ್ ಅವರ ಹಲವು ದಶಕಗಳ ಅಭಿನಯ ಪಯಣ, ಬಹುಮುಖ ಪ್ರತಿಭೆ ಮತ್ತು ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲಿನ ಅವರ ಪ್ರಭಾವವನ್ನು ಉಲ್ಲೇಖಿಸಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports