Last Updated:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕಲಾ ಸಂಗಮ’ ಕಾರ್ಯಕ್ರಮದ ಅಂಗವಾಗಿ, ಕನ್ನಡ ಪುಸ್ತಕ ಪ್ರಾಧಿಕಾರವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಸೆಪ್ಟೆಂಬರ್ 25 ರಿಂದ 27 ರವರೆಗೆ ‘ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026’ ಅನ್ನು ಆಯೋಜಿಸಿದೆ. ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕನ್ನಡ ಪ್ರಕಾಶಕರು ಮತ್ತು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರ (Ravindra Kalakshetra) ಆವರಣದಲ್ಲಿ ‘ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026’ (Book Fair) ಅನ್ನು ಅದ್ದೂರಿಯಾಗಿ ಆಯೋಜಿಸುತ್ತಿದೆ. ಕನ್ನಡ ಪುಸ್ತಕ ಪ್ರಕಾಶಕರು ಹಾಗೂ ಮಾರಾಟಗಾರರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಳಿಗೆ ಪಡೆಯಲು ಏನು ಮಾಡಬೇಕು ಗೊತ್ತಾ?
ಕನ್ನಡ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರು ತಮ್ಮ ಪುಸ್ತಕಗಳನ್ನು ನೇರವಾಗಿ ಓದುಗರಿಗೆ ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಉತ್ತಮ ವೇದಿಕೆ ಕಲ್ಪಿಸುವುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹಾಗೂ ನಿಯಮಗಳು
ಮೇಳದಲ್ಲಿ ಮಳಿಗೆ ಪಡೆಯಲು ಇಚ್ಛಿಸುವವರು 1,000 ರೂಪಾಯಿ ಭದ್ರತಾ ಠೇವಣಿಯನ್ನು ‘ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು’ ಇವರ ಹೆಸರಿನಲ್ಲಿ ಡಿ.ಡಿ ಮೂಲಕ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಯನ್ನು ಬೆಂಗಳೂರಿನ ಕನ್ನಡ ಭವನದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಥವಾ ಅಧಿಕೃತ ವೆಬ್‍ಸೈಟ್ https://kpp.karnataka.gov.in ಮೂಲಕ ಉಚಿತವಾಗಿ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ ಯೊಂದಿಗೆ ಸೆಪ್ಟೆಂಬರ್ 22 ರ ಸಂಜೆ 5:00 ಗಂಟೆಯೊಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ತಲುಪಿಸಬೇಕು.
ವಿಳಾಸ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560002.
ಮೇಳದಲ್ಲಿ ಸೀಮಿತ ಸಂಖ್ಯೆಯ ಮಳಿಗೆಗಳು ಮಾತ್ರ ಲಭ್ಯವಿದ್ದು, ಮೊದಲು ಬಂದ ಅರ್ಜಿಗಳಿಗೆ ಮುಂಚೂಣಿ ಆದ್ಯತೆ ನೀಡಲಾಗುವುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.
ಆಸಕ್ತ ಪ್ರಕಾಶಕರು ಅಥವಾ ಮಾರಾಟಗಾರರು ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ದೂರವಾಣಿ ಸಂಖ್ಯೆ 080-22484516 ಅನ್ನು ಸಂಪರ್ಕಿಸಬಹುದಾಗಿದೆ.














