Hubballi
lekhaka-Sandesh R Pawar
ಹುಬ್ಬಳ್ಳಿ, ಜೂನ್, 19: ವಿದ್ಯುತ್ ದರ ಏರಿಕೆ ಜನಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರಿರುವುದು ಒಂದು ಕಡೆಯಾದರೇ, ಮತ್ತೊಂದೆಡೆ ಇದು ವಾಣಿಜ್ಯೋದ್ಯಮಗಳಿಗೆ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ.
ವಿದ್ಯುತ್ ದರದಲ್ಲಿ ಅಸಹಜ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು (ಕೆಸಿಸಿಐ) ಇತರೆ ಎಲ್ಲಾ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಸಂಘ- ಸಂಸ್ಥೆಗಳ ಜೊತೆಗೂಡಿ ಜೂನ್ 22ರಂದು ರಾಜ್ಯಾದ್ಯಂತ ಒಂದು ದಿನದ ಬಂದ್‍ಗೆ ಕರೆ ನೀಡಿದೆ. ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು ಅಂದು ತಮ್ಮ ವಹಿವಾಟು ಬಂದ್ ಮಾಡುವಂತೆಯೂ ತಳಿಸಿದ್ದೇವೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಉದ್ಯಮಿಯಾದ ಪ್ರವೀಣ ಅಗಡಿ ಅವರು ಹೇಳಿದರು.
ಇನ್ನು ವಿದ್ಯುತ್ ದರ ಹೆಚ್ಚಳದಿಂದ ವ್ಯಾಪಾರಸ್ಥರು, ಜನಸಾಮಾನ್ಯರು ಮತ್ತು ಕೈಗಾರಿಕೆಗಳ ಮೇಲೆ ಆಗಿರುವ ದುಷ್ಪರಿಣಾಮ ಕುರಿತು ಸರ್ಕಾರಕ್ಕೆ ತಿಳಿಸುವ ಪ್ರಯತ್ನವನ್ನು 8 ದಿನಗಳಿಂದ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಮತ್ತು ಸರ್ಕಾರದ ಪ್ರತಿನಿಧಿಗಳಿಂದ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಅನಿವಾರ್ಯವಾಗಿ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಹೇಳಿದರು.
ಮತ್ತೊಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಭಾನುವಾರ ಈ ಯೋಜನೆಗೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಇಲಾಖೆಯಿಂದ ಕ್ಯೂ ಆರ್ ಕೋಡ್ ಬಂದ ಮೇಲೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂದು ಸಿಬ್ಬಂದಿ ಹೇಳಿದ್ದರಿಂದ ಮೊದಲ ದಿನ ಅರ್ಜಿ ಸ್ವೀಕಾರಕ್ಕೆ ಈ ರೀತಿಯ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ: ವಿದ್ಯುತ್ ಬೆಲೆ ಏರಿಕೆ ಖಂಡಿಸಿ ರಸ್ತೆಗಿಳಿದ ಕೈಗಾರಿಕೋದ್ಯಮಿಗಳು
ಧಾರವಾಡದ ಕಲಾಭವನದ ಬಳಿ ಇರುವ ಕರ್ನಾಟಕ ಒನ್ ಕೇಂದ್ರ ಹೆಸ್ಕಾಂ ಕಚೇರಿಯಲ್ಲಿ ಸಾರ್ವಜನಿಕರು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಹೆಸ್ಕಾಂ ಸಿಬ್ಬಂದಿ ಸಹಾಯವಾಣಿಯನ್ನೂ ಆರಂಭಿಸಿ ಗಣಕಯಂತ್ರಕ್ಕೆ ಬಲೂನ್ ಕಟ್ಟಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದು ಕಂಡುಬಂದಿದೆ.
English summary
Electricity charges hike: Karnataka Chamber of Commerce Organization called for Karnataka bandh on June 22, here see details
Story first published: Monday, June 19, 2023, 13:40 [IST]