Last Updated:
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಎರಡನೇ ಮಗುವಿನ ಪೋಷಕರಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ದೀಪಿಕಾ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಬಾಲಿವುಡ್ನ ಜನಪ್ರಿಯ ದಂಪತಿ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ (Ranveer Singh) ಕುಟುಂಬದಲ್ಲಿ ಮತ್ತೊಮ್ಮೆ ಸಂಭ್ರಮ ಮನೆ ಮಾಡಿದೆ. ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದ್ದು, ಕುಟುಂಬಕ್ಕೆ ಹೆಣ್ಣು ಮಗುವಿನ ಆಗಮನವಾಗಿದೆ. ಸೆಪ್ಟೆಂಬರ್ 19, 2026ರಂದು ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಎರಡನೇ ಮಗುವಿನ ಪೋಷಕರಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ದೀಪಿಕಾ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ದೀಪಿಕಾ ಪಡುಕೋಣೆ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಎರಡು ಪೋಸ್ಟ್ಗಳನ್ನು ಹಂಚಿಕೊಂಡು ತಮ್ಮ ಕಿರಿಯ ಮಗಳ ಆಗಮನವನ್ನು ಘೋಷಿಸಿದ್ದಾರೆ. ಈ ಪೋಸ್ಟ್ನಲ್ಲಿಮಗುವಿನ ಪುಟ್ಟ ಹೆಜ್ಜೆಗುರುತಿನ ಚಿತ್ರ ಗಮನ ಸೆಳೆದಿದೆ. ಜೊತೆಗೆ ದೀಪಿಕಾ ಹಂಚಿಕೊಂಡಿರುವ ಪೋಸ್ಟ್ ನಲ್ಲಿ ವೆಲ್ಕಮ್ ಬೇಬಿ ಗರ್ಲ್ 19/9/2026 ಎಂದು ಬರೆಯಲಾಗಿದೆ.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಈಗಾಗಲೇ ಒಂದು ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಇದೀಗ ಎರಡನೇ ಮಗುವಾಗಿ ಮತ್ತೊಂದು ಹೆಣ್ಣು ಮಗು ಮನೆಗೆ ಬಂದಿರುವುದು ಕುಟುಂಬದ ಸಂತಸವನ್ನು ಮತ್ತಷ್ಟು ಹೆಚ್ಚಿಸಿದೆ. ದಂಪತಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಜೊತೆಗೆ ದೀಪಿಕಾ ಮತ್ತು ರಣವೀರ್ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಆಗಾಗ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಎರಡನೇ ಮಗುವಿನ ಆಗಮನದ ಸುದ್ದಿಯನ್ನು ಸರಳವಾದ ಪೋಸ್ಟ್ ಮೂಲಕ ಹಂಚಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.














